Exodus 24:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರ ನಾಯಕರೆಲ್ಲರೂ ಯೆಹೋವನನ್ನು ನೋಡಿದರು, ಆದರೆ ದೇವರು ಅವರನ್ನು ನಾಶಮಾಡಲಿಲ್ಲ. ಅವರೆಲ್ಲರೂ ದೇವದರ್ಶನ ಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು.
Kannada BSI Bible 2016
ಆದರೆ ಇಸ್ರಾಯೇಲ್ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಇಸ್ರಾಯೇಲ್ಯರ ಆ ಮುಖಂಡರಿಗೆ ಯಾವ ಕೇಡೂ ಮಾಡಲಿಲ್ಲ; ಅವರು ದೇವರ ದರ್ಶನಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.
Kannada Bible (KNCL) BSI 2016
ಅವರು ಇಸ್ರಯೇಲರ ಮುಖಂಡರಿಗೆ ಯಾವ ಹಾನಿಯನ್ನೂ ಮಾಡಲಿಲ್ಲ. ಆ ಮುಖಂಡರು ದೇವರನ್ನು ಸಂದರ್ಶಿಸಿದರು; ಬಳಿಕ ಅನ್ನಪಾನಗಳನ್ನು ತೆಗೆದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವರು ಇಸ್ರಾಯೇಲರ ಶ್ರೇಷ್ಠರನ್ನು ತಳ್ಳಿಬಿಡಲಿಲ್ಲ. ಅವರು ಸಹ ದೇವರನ್ನು ನೋಡಿ, ಊಟಮಾಡಿ, ಪಾನಮಾಡಿದರು.