Exodus 24:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಹಿರಿಯರಿಗೆ, “ನಾವು ನಿಮ್ಮ ಬಳಿಗೆ ಹಿಂತಿರುಗಿ ಬರುವ ತನಕ ನೀವು ಇಲ್ಲಿ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಿದ್ದಾರೆ; ನಿಮ್ಮಲ್ಲಿ ಯಾರಿಗಾದರೂ ಸಮಸ್ಯೆಯಿದ್ದರೆ ಅವರ ಬಳಿಗೆ ಹೋಗಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾವು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲಿರುವರು. ಯಾರಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ” ಎಂದು ಹೇಳಿದನು.
Kannada BSI Bible 2016
ಹಿರಿಯರಿಗೆ ಅವನು--ನಾವು ನಿಮ್ಮ ಬಳಿಗೆ ತಿರಿಗಿ ಬರುವ ವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರ್ರಿ; ಇಗೋ, ಆರೋ ನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿ ಗಾದರೂ ವ್ಯಾಜ್ಯವಿದ್ದರೆ ಅವನು ಅವರ ಬಳಿಗೆ ಬರಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲು ಅವನು ಹಿರಿಯರಿಗೆ - ನಾವು ತಿರಿಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರ್ರಿ; ಆರೋನನೂ ಹೂರನೂ ನಿಮ್ಮ ಬಳಿಯಲ್ಲಿದ್ದಾರಷ್ಟೆ; ಯಾವನಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ ಎಂದು ಹೇಳಿದನು.
Kannada Bible (KNCL) BSI 2016
ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾನು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೆ ಕಾದುಕೊಂಡಿರಿ, ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲೆ ಇರುವರು. ಇತ್ಯರ್ಥವಾಗಬೇಕಾದ ವಿಷಯವೇನಾದರೂ ಇದ್ದರೆ ಅವರ ಬಳಿ ಹೋಗಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆ ಹಿರಿಯರಿಗೆ, “ನಾವು ನಿಮ್ಮ ಬಳಿಗೆ ತಿರುಗಿ ಬರುವವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರಿ. ಆರೋನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿಗಾದರೂ ವ್ಯಾಜ್ಯವಿದ್ದರೆ ಅವರ ಬಳಿಗೆ ಹೋಗಲಿ,” ಎಂದನು.