Exodus 24:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಮೋಶೆಯು ಮೋಡದಲ್ಲಿ ಬೆಟ್ಟದ ಮೇಲೆ ಇನ್ನೂ ಎತ್ತರಕ್ಕೆ ಹೋದನು. ಮೋಶೆಯು ಬೆಟ್ಟದಲ್ಲಿ ಹಗಲಿರುಳು ನಲವತ್ತು ದಿವಸ ಇದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.
Kannada BSI Bible 2016
ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ಹಗಲಿರುಳು ನಾಲ್ವತ್ತು ದಿವಸ ಇದ್ದನು.
Kannada Bible (KNCL) BSI 2016
ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಾಲ್ವತ್ತು ದಿವಸ ಹಗಲಿರುಳು ತಂಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಮೇಘದ ಮಧ್ಯಕ್ಕೆ ಬಂದು ಬೆಟ್ಟವನ್ನೇರಿದನು. ಅವನು ಹಗಲಿರುಳು ನಲವತ್ತು ದಿವಸ ಪರ್ವತದ ಮೇಲಿದ್ದನು.