Exodus 24:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಮೋಶೆಯು ಯಜ್ಞಗಳನ್ನು ಸಮರ್ಪಿಸುವುದಕ್ಕೆ ಇಸ್ರೇಲರ ಯೌವನಸ್ಥರನ್ನು ಕಳುಹಿಸಿದನು. ಅವರು ಯೆಹೋವನಿಗೆ ಎತ್ತುಗಳನ್ನು ಸರ್ವಾಂಗಹೋಮಗಳಾಗಿಯೂ ಸಮಾಧಾನಯಜ್ಞಗಳಾಗಿಯೂ ಅರ್ಪಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು.
Kannada BSI Bible 2016
ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್‌ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟನು.
Kannada Bible (KNCL) BSI 2016
ಇಸ್ರಯೇಲರ ಯೌವನಸ್ಥರು ಸರ್ವೇಶ್ವರ ಸ್ವಾಮಿಗೆ ದಹನಬಲಿಗಳನ್ನು ಅರ್ಪಿಸುವಂತೆಯೂ ಸಮಾಧಾನದ ಬಲಿಗಾಗಿ ಹೋರಿಗಳನ್ನು ಅರ್ಪಿಸುವಂತೆಯೂ ಅಪ್ಪಣೆಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಹೋರಿಗಳನ್ನೂ ಅರ್ಪಿಸುವುದಕ್ಕಾಗಿ ಇಸ್ರಾಯೇಲರ ಯೌವನಸ್ಥರನ್ನು ಕಳುಹಿಸಲು ಅವರು ಅದನ್ನು ಅರ್ಪಿಸಿದರು.