Exodus 24:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಮೋಶೆ ಯಜ್ಞಗಳ ರಕ್ತದಿಂದ ತುಂಬಿದ ಬೋಗುಣಿಯನ್ನು ತೆಗೆದುಕೊಂಡು ಅದರಲ್ಲಿದ್ದ ರಕ್ತವನ್ನು ಜನರ ಮೇಲೆ ಚಿಮಿಕಿಸಿ, “ಈ ಸುರುಳಿಯಲ್ಲಿರುವ ವಾಕ್ಯಗಳಿಗನುಸಾರವಾಗಿ ಯೆಹೋವನು ನಿಮ್ಮೊಡನೆ ಒಂದು ವಿಶೇಷ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆಂಬುದನ್ನು ಈ ರಕ್ತವು ಸೂಚಿಸುತ್ತದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು.
Kannada BSI Bible 2016
ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೋಶೆ ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿವಿುಕಿಸಿ - ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವು ಇದೇ ಅಂದನು.
Kannada Bible (KNCL) BSI 2016
ಆಗ ಮೋಶೆ ಬಟ್ಟಲುಗಳಲ್ಲಿದ್ದ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲ ಆಜ್ಞೆಗಳ ಪ್ರಕಾರ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತ ಇದೇ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಈ ಎಲ್ಲಾ ಮಾತುಗಳ ವಿಷಯದಲ್ಲಿ ಯೆಹೋವ ದೇವರು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತ,” ಎಂದನು.