Exodus 25:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಜಾಲೀಮರದಿಂದ ಒಂದು ವಿಶೇಷ ಪೆಟ್ಟಿಗೆಯನ್ನು ಮಾಡಿಸು. ಈ ಪವಿತ್ರ ಪೆಟ್ಟಿಗೆಯು ಎರಡೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವು ಹಾಗೂ ಒಂದುವರೆ ಮೊಳ ಎತ್ತರವು ಆಗಿರಬೇಕು.
Kannada BSI Bible 2016
ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿರಬೇಕು.
Kannada Bible (KNCL) BSI 2016
“ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಹಾಗು ಒಂದುವರೆ ಮೊಳ ಎತ್ತರವಾಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಜಾಲಿ ಮರದಿಂದ ಸುಮಾರು ಒಂದು ಮೀಟರ್ ಉದ್ದ ಮತ್ತು ಅರವತ್ತೆಂಟು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರವಾಗಿರುವ ಮಂಜೂಷವನ್ನು ಮಾಡಬೇಕು.