Exodus 25:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಲ್ಲದೆ ದೇವರು ಮೋಶೆಗೆ, “ಅಪ್ಪಟ ಬಂಗಾರದಿಂದ ಕೃಪಾಸನವನ್ನು ಮಾಡಿಸಬೇಕು. ಅದು ಎರಡೂವರೆ ಮೊಳ ಉದ್ದವಾಗಿರಬೇಕು. ಒಂದೂವರೆ ಮೊಳ ಅಗಲವಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿರಬೇಕು.
Kannada BSI Bible 2016
ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರಬೇಕು.
Kannada Bible (KNCL) BSI 2016
“ಇದೂ ಅಲ್ಲದೆ, ಅಪ್ಪಟ ಬಂಗಾರದ ಒಂದು ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದ ಹಾಗು ಒಂದುವರೆ ಮೊಳ ಅಗಲದ್ದಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸುಮಾರು ನೂರಹತ್ತು ಸೆಂಟಿಮೀಟರ್ ಉದ್ದವೂ ಎಪ್ಪತ್ತು ಸೆಂಟಿಮೀಟರ್ ಅಗಲವೂ ಇರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.