Exodus 25:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲರು ನನಗೆ ಕಾಣಿಕೆಗಳನ್ನು ತರಬೇಕೆಂದು ಅವರಿಗೆ ಹೇಳು. ಪ್ರತಿಯೊಬ್ಬನು ನನಗೆ ಕೊಡುವುದರ ಬಗ್ಗೆ ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಈ ಕಾಣಿಕೆಗಳನ್ನು ನನಗಾಗಿ ಸ್ವೀಕರಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.
Kannada BSI Bible 2016
ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ನನಗೋಸ್ಕರ ಕಾಣಿಕೆಯನ್ನು ಮೀಸಲಿಡಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.
Kannada Bible (KNCL) BSI 2016
“ಇಸ್ರಯೇಲರು ನನಗಾಗಿ ಕಾಣಿಕೆಯನ್ನು ಮೀಸಲಿಡಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ಸ್ವೀಕರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನಗೆ ಕಾಣಿಕೆಗಳನ್ನು ತೆಗೆದುಕೊಂಡು ಬರುವಂತೆ ಇಸ್ರಾಯೇಲರ ಸಂಗಡ ಮಾತನಾಡು. ಯಾರ ಹೃದಯದಲ್ಲಿ ಕಾಣಿಕೆ ಕೊಡಬೇಕೆಂಬ ಪ್ರೇರಣೆ ಹುಟ್ಟುತ್ತದೋ, ಅಂಥವರ ಕಾಣಿಕೆಯನ್ನು ನೀನು ತೆಗೆದುಕೊಳ್ಳಬೇಕು.