Exodus 25:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿನಗೆ ದರ್ಶನ ಕೊಡುವಾಗ ಒಡಂಬಡಿಕೆ ಪೆಟ್ಟಿಗೆಯ ಮೇಲಿರುವ ಕೆರೂಬಿಗಳ ಮಧ್ಯದಿಂದ ನಿನ್ನ ಸಂಗಡ ಮಾತಾಡುವೆನು; ಇಸ್ರೇಲರಿಗೆ ಆಜ್ಞಾಪಿಸಬೇಕಾದವುಗಳನ್ನು ನಿನಗೆ ತಿಳಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.
Kannada BSI Bible 2016
ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್‌ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು; ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತಾಡಿ ನೀನು ಇಸ್ರಾಯೇಲ್ಯರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.
Kannada Bible (KNCL) BSI 2016
ಅಲ್ಲಿಯೇ ನಾನು ನಿಮಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಅಜ್ಞಾಶಾಸನಗಳನ್ನಿಟ್ಟಿರುವ ಮಂಜೂಷದ ಮೇಲಿನ ಎರಡು ಕೆರೂಬಿಗಳ ನಡುವೆಯೇ ನಾನಿದ್ದು ನಿನ್ನ ಸಂಗಡ ಮಾತಾಡುವೆನು. ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲ ವಿಷಯಗಳನ್ನು ತಿಳಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅಲ್ಲಿ ನಿನಗೆ ದರ್ಶನವನ್ನು ಕೊಟ್ಟು, ಕರುಣಾಸನದ ಮೇಲೆ ಒಡಂಬಡಿಕೆಯ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲರ ವಿಷಯದಲ್ಲಿ ನಾನು ನಿನಗೆ ಆಜ್ಞಾಪಿಸುವವುಗಳನ್ನೆಲ್ಲಾ ನಿನಗೆ ತಿಳಿಸುವೆನು.