Exodus 25:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀನು ಜಾಲೀಮರದಿಂದ ಮೇಜನ್ನು ಮಾಡಬೇಕು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಜಾಲೀಮರದಿಂದ ಒಂದು ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯೂ, ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು.
Kannada BSI Bible 2016
ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಜಾಲೀಮರದಿಂದ ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು.
Kannada Bible (KNCL) BSI 2016
“ಜಾಲೀ ಮರದಿಂದ ಒಂದು ಮೇಜನ್ನು ಮಾಡಿಸು. ಅದು ಎರಡು ಮೊಳ ಉದ್ದ ಒಂದು ಮೊಳ ಅಗಲ ಹಾಗು ಒಂದುವರೆ ಮೊಳ ಎತ್ತರವಾಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸುಮಾರು ತೊಂಬತ್ತು ಸೆಂಟಿಮೀಟರ್ ಉದ್ದ, ನಲವತ್ತೈದು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರ ಇರುವ ಮೇಜನ್ನು ಜಾಲಿ ಮರದಿಂದ ಮಾಡಬೇಕು.