Exodus 25:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬಳಿಕ ಒಂದು ದೀಪಸ್ತಂಭವನ್ನು ಶುದ್ಧಬಂಗಾರದಿಂದ ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ಕಸೂತಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿದ್ದು ಪುಷ್ಪಪಾತ್ರೆಗಳಂತೆಯೂ ಅಲಂಕಾರವಾಗಿ ಕೆತ್ತಲ್ಪಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು.
Kannada BSI Bible 2016
ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಚೊಕ್ಕಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ನಕಾಸಿಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಪುಷ್ಪಪಾತ್ರೆಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿರಬೇಕು.
Kannada Bible (KNCL) BSI 2016
“ಅಪ್ಪಟ ಬಂಗಾರದಿಂದ ಒಂದು ದೀಪವೃಕ್ಷವನ್ನು ಮಾಡಿಸಬೇಕು. ಅದರ ಬುಡವನ್ನು ಹಾಗು ಕಾಂಡವನ್ನು ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪವೃಕ್ಷವೆಲ್ಲಾ ಅಖಂಡವಾಗಿರಬೇಕು. ಹೂಗಳಿಂದ, ಹೂಮೊಗ್ಗುಗಳಿಂದ ಕೂಡಿ ಅಲಂಕಾರವಾಗಿ ಕೆತ್ತಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಬೇಕು. ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳಂತೆಯೂ ಹಣತೆಗಳಂತೆಯೂ ಮೊಗ್ಗುಗಳಂತೆಯೂ ಇರಬೇಕು.