Exodus 25:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರುಮೂರು ಪುಷ್ಪಾಲಂಕಾರಗಳಿರಬೇಕು. ಒಂದೊಂದು ಅಲಂಕಾರಕ್ಕೆ ಒಂದು ಪುಷ್ಪಪಾತ್ರೆಯೂ ಒಂದು ಪುಷ್ಪವೂ ಇರಬೇಕು. ಆರು ಕೊಂಬೆಗಳನ್ನೂ ಹಾಗೇ ಮಾಡಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಂದು ಕೊಂಬೆಗಳಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಹೂವುಗಳೂ ಮೊಗ್ಗುಗಳೂ ಇರಬೇಕು. ದೀಪಸ್ತಂಭದಿಂದ ಬರುವ ಆರು ಕೊಂಬೆಗಳನ್ನು ಹಾಗೆಯೇ ಮಾಡಿಸಬೇಕು.
Kannada BSI Bible 2016
ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಂದು ಕೊಂಬೆಯಲ್ಲಿ ಬಾದಾವಿು ಹೂವುಗಳಂತಿರುವ ಮೂರು ಮೂರು ಪುಷ್ಪಾಲಂಕಾರಗಳಿರಬೇಕು; ಒಂದೊಂದು ಅಲಂಕಾರಕ್ಕೆ ಒಂದು ಪುಷ್ಪಪಾತ್ರೆಯೂ ಒಂದು ಪುಷ್ಪವೂ ಇರಬೇಕು; ಆರು ಕೊಂಬೆಗಳನ್ನೂ ಹಾಗೇ ಮಾಡಿಸಬೇಕು.
Kannada Bible (KNCL) BSI 2016
ಪ್ರತಿಯೊಂದು ಕೊಂಬೆಯಲ್ಲೂ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಲಂಕಾರಗಳಿರಬೇಕು. ಒಂದೊಂದು ಅಲಂಕಾರಕ್ಕೆ ಒಂದು ಮೊಗ್ಗು ಹಾಗು ಒಂದು ಹೂ ಇರಬೇಕು. ಆರು ಕೊಂಬೆಗಳನ್ನೂ ಹಾಗೇ ಮಾಡಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಕೊಂಬೆಯಲ್ಲಿ ಬಾದಾಮಿ ಪುಷ್ಟದಂತಿರುವ ಮೂರು ಹಣತೆಗಳು, ಮೊಗ್ಗು ಪುಷ್ಟಗಳಿರಬೇಕು ಮತ್ತು ಮತ್ತೊಂದು ಕೊಂಬೆಯಲ್ಲಿ ಬಾದಾಮಿಯ ಪುಷ್ಟವಿದ್ದ ಮೂರು ಹಣತೆಗಳು, ಮೊಗ್ಗು ಪುಷ್ಟಗಳಿರಬೇಕು. ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿಯೂ ಇರಬೇಕು.