Exodus 26:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೋಶೆಗೆ, “ಪವಿತ್ರ ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳನ್ನು ನಾರುಬಟ್ಟೆ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರದಿಂದ ಮಾಡಿಸಬೇಕು. ನುರಿತ ಕೆಲಸಗಾರನು ಪರದೆಗಳಲ್ಲಿ ರೆಕ್ಕೆಗಳಿರುವ ಕೆರೂಬಿಗಳ ಚಿತ್ರವನ್ನು ಕಸೂತಿ ಹಾಕಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.
Kannada BSI Bible 2016
ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
[ನನ್ನ ನಿವಾಸಕ್ಕಾಗಿ] ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಧೂಮ್ರ ರಕ್ತವರ್ಣಗಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿಸಬೇಕು.
Kannada Bible (KNCL) BSI 2016
“ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮಾತ್ಕಾರವಾಗಿ ಕಸೂತಿ ಹಾಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಮಾಡಿದ ಕೆರೂಬಿಗಳುಳ್ಳವುಗಳಾಗಿಯೂ ಇರಬೇಕು.