Exodus 26:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ ಕೊಂಡಿಗಳನ್ನು ಮಾಡಬೇಕು. ಹೀಗೆ ಒಂದೇ ಗುಡಾರವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವು ಸೇರಿ ಒಂದೇ ಗುಡಾರವಾಗುವಂತೆ ಜೋಡಿಸಬೇಕು.
Kannada BSI Bible 2016
ಇದಲ್ಲದೆ ಹಿತ್ತಾಳೆಯ ಐವತ್ತು ಕೊಂಡಿಗಳನ್ನು ಮಾಡಿ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಗುಡಾರವು ಒಂದಾಗುವ ಹಾಗೆ ಜೋಡಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಒಂದೇ ಡೇರೆಯಾಗುವಂತೆ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವನ್ನು ಕೂಡಿಸಬೇಕು.
Kannada Bible (KNCL) BSI 2016
ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಒಂದೇ ಡೇರೆಯಾಗುವಂತೆ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಎಲ್ಲವನ್ನು ಕೂಡಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಕಂಚಿನ ಐವತ್ತು ಕೊಂಡಿಗಳನ್ನು ಮಾಡಿ, ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ, ಒಂದೇ ಡೇರೆ ಆಗುವಂತೆ ಜೋಡಿಸಬೇಕು.