Exodus 26:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪಾರ್ಶ್ವಗಳಲ್ಲಿ ಈ ಗುಡಾರದ ಪರದೆಗಳು, ಪವಿತ್ರಗುಡಾರದ ಕೆಳಗಣ ಅಂಚುಗಳಿಂದ ಕೆಳಗೆ ಒಂದು ಮೊಳದಷ್ಟು ತೂಗಾಡುವವು. ಆದ್ದರಿಂದ ಈ ಡೇರೆಯು ಸಂಪೂರ್ಣವಾಗಿ ಪವಿತ್ರಗುಡಾರವನ್ನು ಮುಚ್ಚಿಕೊಳ್ಳುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊದಿಕೆಯ ಪರದೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ, ಆ ಕಡೆ ಒಂದು ಮೊಳವೂ ಹೆಚ್ಚಾಗಿರುವುದು. ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ತೂಗಾಡುವಂತಿರಬೇಕು.
Kannada BSI Bible 2016
ಗುಡಾರದ ತೆರೆಗಳ ಉದ್ದದಲ್ಲಿ ಆಚೆ ಈಚೆ ಮಿಕ್ಕಿದ ಒಂದು ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವದಕ್ಕಾಗಿ ತೂಗಾಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊದಿಕೆಯ ಬಟ್ಟೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ ಆ ಕಡೆ ಒಂದು ಮೊಳವೂ ಹೆಚ್ಚಾಗಿರುವದಷ್ಟೆ; ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ಇರಲಿ;
Kannada Bible (KNCL) BSI 2016
ಹೊದಿಕೆಯ ಬಟ್ಟೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳ ಆ ಕಡೆ ಒಂದು ಮೊಳ ಹೆಚ್ಚಾಗಿರುತ್ತದೆ. ಅವು ಒಳಗಿನ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗುಡಾರದ ಪರದೆಗಳ ಉದ್ದದಲ್ಲಿ ಈಚೆ ಆಚೆ ಮಿಕ್ಕಿದ ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವುದಕ್ಕಾಗಿ ತೂಗಾಡಲಿ.