Exodus 26:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೊರಗಿನ ಗುಡಾರಕ್ಕೆ ಸರಿಹೊಂದುವ ಎರಡು ಹೊದಿಕೆಗಳನ್ನು ಮಾಡಿಸಬೇಕು. ಒಂದು ಹೊದಿಕೆಯನ್ನು ಕೆಂಪುಬಣ್ಣದ ಕುರಿದೊಗಲಿನ ಚರ್ಮದಿಂದ ಮಾಡಬೇಕು. ಇನ್ನೊಂದು ಹೊದಿಕೆಯನ್ನು ಉತ್ತಮ ತೊಗಲಿನಿಂದ ಮಾಡಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನು ಮಾಡಿಸಬೇಕು.
Kannada BSI Bible 2016
ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಹೊದಿಕೆಗೆ ಹೊದಿಸುವದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿಸಬೇಕು.
Kannada Bible (KNCL) BSI 2016
ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು ಹಾಗು ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗುಡಾರದ ಮೇಲ್ಹೊದಿಕೆಯನ್ನು ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದಿಂದ ಮಾಡಬೇಕು, ಅದರ ಮೇಲೆ ಕಡಲುಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಬೇಕು.