Exodus 26:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿ ಚೌಕಟ್ಟನ್ನು ಮಾಡುವುದಕ್ಕೆ ಎರಡು ಕಡೆಯ ಕೋಲುಗಳನ್ನು ಅಡ್ಡಪಟ್ಟಿಗಳೊಂದಿಗೆ ಒಟ್ಟಾಗಿ ಜೋಡಿಸಬೇಕು. ಪವಿತ್ರಗುಡಾರದ ಎಲ್ಲಾ ಚೌಕಟ್ಟುಗಳು ಒಂದೇ ರೀತಿಯಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಂದು ಚೌಕಟ್ಟು ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆಯೇ ಮಾಡಿಸಬೇಕು.
Kannada BSI Bible 2016
ಒಂದು ಹಲಗೆಗೆ ಎರಡು ಕೂರುಗಳು ಇರಬೇಕು. ಅವುಗಳನ್ನು ಕ್ರಮವಾಗಿ ಇರಿಸುವಂತೆ ಅವು ಎದುರು ಬದುರಾಗಿ ಇರಬೇಕು. ಹೀಗೆ ಗುಡಾರದ ಎಲ್ಲಾ ಹಲಗೆ ಗಳಿಗೂ ನೀನು ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿಸಬೇಕು.
Kannada Bible (KNCL) BSI 2016
ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟು ಎರಡು ನಿಲವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲ ಚೌಕಟ್ಟುಗಳನ್ನು ಹಾಗೇ ಮಾಡಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಚೌಕಟ್ಟಿಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಬೇಕು. ಅದೇ ಪ್ರಕಾರ ಗುಡಾರದ ಎಲ್ಲಾ ಚೌಕಟ್ಟುಗಳಿಗೆ ಮಾಡಬೇಕು.