Exodus 26:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪವಿತ್ರಗುಡಾರದ ಒಳಭಾಗವನ್ನು ವಿಂಗಡಿಸಲು ಉತ್ತಮವಾದ ಹುರಿನಾರಿನ ಬಟ್ಟೆಯಿಂದ ಒಂದು ವಿಶೇಷ ಪರದೆಯನ್ನು ಮಾಡಿಸಬೇಕು. ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಪರದೆಯ ಮೇಲೆ ಕೆರೂಬಿಗಳ ಚಿತ್ರಗಳನ್ನು ಕಸೂತಿಹಾಕಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.
Kannada BSI Bible 2016
ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿಸಬೇಕು.
Kannada Bible (KNCL) BSI 2016
ಹುರಿನಾರಿನ ಬಟ್ಟೆಯಲ್ಲಿ ನೀಲಿ, ಧೂಮ್ರ, ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಕಲಾತ್ಮಕವಾಗಿ ಕಸೂತಿಹಾಕಿ ಒಂದು ತೆರೆಯ ಚಿತ್ರವನ್ನು ಮಾಡಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಬೇಕು. ಅದರ ಮೇಲೆ ಕೌಶಲ್ಯದಿಂದ ಕಸೂತಿಹಾಕಿ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.