Exodus 26:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಅವುಗಳನ್ನು ಚಿನ್ನದಿಂದ ಹೊದಿಸಬೇಕು. ನಾಲ್ಕು ಕಂಬಗಳ ಮೇಲೆ ಚಿನ್ನದಿಂದ ಮಾಡಿದ ಕೊಂಡಿಗಳನ್ನು ಹಾಕಿಸಬೇಕು. ಕಂಬಗಳ ಕೆಳಗೆ ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಹಾಕಿಸಬೇಕು. ಬಳಿಕ ಚಿನ್ನದ ಕೊಂಡಿಗಳಲ್ಲಿ ಪರದೆಯನ್ನು ತೂಗುಹಾಕಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ಪರದೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.
Kannada BSI Bible 2016
ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಿ ನಾಲ್ಕು ಬೆಳ್ಳಿಯ ಗದ್ದಿಗೇ ಕಲ್ಲುಗಳ ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ತೆರೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.
Kannada Bible (KNCL) BSI 2016
ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೇ ಕಲ್ಲುಗಳ ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ತೆರೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಾಲಿ ಮರದ ನಾಲ್ಕು ಸ್ತಂಭಗಳನ್ನು ಮಾಡಿ, ಬಂಗಾರ ತಗಡುಗಳಿಂದ ಅವುಗಳನ್ನು ಹೊದಿಸಿದರು. ಅವುಗಳಿಗೆ ಬಂಗಾರದ ಕೊಂಡಿಗಳನ್ನು ಮಾಡಿ, ಬೆಳ್ಳಿಯ ನಾಲ್ಕು ಗದ್ದಿಗೇ ಕಲ್ಲುಗಳ ಮೇಲೆ ಊರಿಕೊಂಡಿರುವ ಜಾಲಿ ಮರದ ಸ್ತಂಭಗಳಲ್ಲಿ ಅದನ್ನು ತೂಗು ಹಾಕಬೇಕು.