Exodus 26:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚಿನ್ನದ ಬಳೆಗಳ ಕೆಳಗೆ ಪರದೆಯನ್ನು ಹಾಕಿಸಬೇಕು; ಪರದೆಯ ಹಿಂಭಾಗದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಬೇಕು. ಈ ಪರದೆಯು ಪವಿತ್ರ ಸ್ಥಳವನ್ನು ಮಹಾಪವಿತ್ರ ಸ್ಥಳದಿಂದ ಪ್ರತ್ಯೇಕಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು.
Kannada BSI Bible 2016
ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ತೆರೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು, ಆ ತೆರೆಯು ಪವಿತ್ರಸ್ಥಾನವೆಂಬದನ್ನೂ ಮಹಾಪವಿತ್ರಸ್ಥಾನವೆಂಬದನ್ನೂ ಬೇರೆ ಬೇರೆ ಮಾಡುವದು.
Kannada Bible (KNCL) BSI 2016
ಆ ತೆರೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ತೆರೆಯು ಪವಿತ್ರಸ್ಥಾನವೆಂಬುದನ್ನೂ ಮಹಾಪವಿತ್ರಸ್ಥಾನವೆಂಬುದನ್ನೂ ಬೇರೆ ಬೇರೆ ಮಾಡುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪರದೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ, ಪರದೆಯೊಳಗೆ ಒಡಂಬಡಿಕೆಯ ಮಂಜೂಷವನ್ನು ತರಬೇಕು. ಪರಿಶುದ್ಧ ಸ್ಥಳಕ್ಕೂ ಮಹಾಪರಿಶುದ್ಧ ಸ್ಥಳಕ್ಕೂ ಮಧ್ಯದಲ್ಲಿ ಆ ಪರದೆಯನ್ನು ವಿಂಗಡಿಸಬೇಕು.