Exodus 26:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಪರದೆಯ ಇನ್ನೊಂದು ಭಾಗದಲ್ಲಿ ನೀನು ಮಾಡಿಸಿದ ವಿಶೇಷ ಮೇಜನ್ನು ಇಡಬೇಕು. ಮೇಜು ಪರಿಶುದ್ಧ ಗುಡಾರದ ಉತ್ತರಭಾಗದಲ್ಲಿರಬೇಕು. ಬಳಿಕ ದೀಪಸ್ತಂಭವನ್ನು ದಕ್ಷಿಣಭಾಗದಲ್ಲಿಡಬೇಕು. ಇದು ಮೇಜಿನ ಎದುರಿಗೆ ಇರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರದೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇರಿಸಬೇಕು. ಮೇಜು ಉತ್ತರ ಭಾಗದಲ್ಲಿರಬೇಕು.
Kannada BSI Bible 2016
ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೆರೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿನ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇಡಬೇಕು; ಮೇಜು ಉತ್ತರ ಕಡೆಯಲ್ಲಿರಬೇಕು.
Kannada Bible (KNCL) BSI 2016
ತೆರೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿನ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪವೃಕ್ಷವನ್ನೂ ಇಡಬೇಕು; ಮೇಜು ಉತ್ತರ ಕಡೆಯಲ್ಲಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಗುಡಾರದ ಉತ್ತರ ಕಡೆಯಲ್ಲಿ ಪರದೆಯ ಹೊರಗೆ ಮೇಜನ್ನು ಇಡಬೇಕು ಮತ್ತು ದೀಪಸ್ತಂಭವನ್ನು ಅದರ ಎದುರಾಗಿ ದಕ್ಷಿಣದ ದಿಕ್ಕಿನಲ್ಲಿ ಇಡಬೇಕು.