Exodus 26:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬಳಿಕ ಪವಿತ್ರಗುಡಾರದ ಪ್ರವೇಶಸ್ಥಳವನ್ನು ಮುಚ್ಚುವುದಕ್ಕೆ ಒಂದು ಪರದೆಯನ್ನು ಮಾಡಿಸಬೇಕು. ಈ ಪರದೆಯನ್ನು ನೀಲಿ, ನೇರಳೆ, ಕೆಂಪು ದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಮಾಡಿಸಿ ಅದರಲ್ಲಿ ಚಿತ್ರಗಳನ್ನು ಕಸೂತಿ ಹಾಕಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು.
Kannada BSI Bible 2016
ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಡೇರೆಯ ಬಾಗಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ಪರದೆಯನ್ನು ಮಾಡಿಸಬೇಕು.
Kannada Bible (KNCL) BSI 2016
ಡೇರೆಯ ಬಾಗಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ, ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ತೆರೆಯನ್ನು ಮಾಡಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಗುಡಾರದ ಬಾಗಿಲಿಗೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರುಗಳಿಂದ ಹೊಸೆದು ಕಸೂತಿ ಕೆಲಸಮಾಡಿದ ಪರದೆಯನ್ನು ಮಾಡಬೇಕು.