Exodus 26:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಅನುಕೂಲವಾಗುವಂತೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಹೀಗೆ ಒಂದೇ ಗುಡಾರವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಪರದೆಗಳನ್ನು ಒಂದಕ್ಕೊಂದು ಹೆಣೆದು ಒಂದೇ ಗುಡಾರವಾಗುವಂತೆ ಜೋಡಿಸಬೇಕು.
Kannada BSI Bible 2016
ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ ಅವುಗಳಿಂದ ತೆರೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಬಟ್ಟೆಗಳನ್ನು ಒಂದಕ್ಕೊಂದು ಕೂಡಿಸಬೇಕು; ಹೀಗೆ ಒಂದೇ ಗುಡಾರವಾಗುವದು.
Kannada Bible (KNCL) BSI 2016
ಇದೂ ಅಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಬಟ್ಟೆಗಳನ್ನು ಒಂದಕ್ಕೊಂದು ಕೂಡಿಸಬೇಕು. ಹೀಗೆ ಒಂದೇ ಗುಡಾರವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ, ಅವುಗಳಿಂದ ಪರದೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗಬೇಕು.