Exodus 26:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಎಲ್ಲಾ ಪರದೆಗಳ ಅಳತೆಯು ಒಂದೇ ಆಗಿರಬೇಕು. ಅವು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.
Kannada BSI Bible 2016
ಒಂದು ತೆರೆಯ ಉದ್ದವು ಮೂವತ್ತು ಮೊಳ, ಅದರ ಅಗಲವು ನಾಲ್ಕು ಮೊಳ, ಹನ್ನೊಂದು ತೆರೆಗಳಿಗೂ ಅದೇ ಅಳತೆ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದೊಂದು ಬಟ್ಟೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು; ಎಲ್ಲಾ ಬಟ್ಟೆಗಳೂ ಒಂದೇ ಅಳತೆಯಾಗಿರಬೇಕು.
Kannada Bible (KNCL) BSI 2016
ಇಂತಹ ಒಂದೊಂದು ಬಟ್ಟೆ ಮೂವತ್ತು ಮೊಳ ಉದ್ದ ಹಾಗೂ ನಾಲ್ಕು ಮೊಳ ಅಗಲವಾಗಿರಬೇಕು. ಎಲ್ಲ ಬಟ್ಟೆಗಳು ಒಂದೇ ಅಳತೆಯಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದೊಂದು ಪರದೆಯು ಸುಮಾರು ಹದಿಮೂರುವರೆ ಮೀಟರ್ ಉದ್ದ ಮತ್ತು ಒಂದುವರೆ ಮೀಟರ್ ಅಗಲ ಇರಬೇಕು. ಹನ್ನೊಂದು ಪರದೆಗಳೂ ಒಂದೇ ಅಳತೆಯಾಗಿರಬೇಕು.