Exodus 27:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಮೋಶೆಗೆ, “ಜಾಲೀಮರದಿಂದ ಯಜ್ಞವೇದಿಕೆಯನ್ನು ಮಾಡಿಸಬೇಕು. ಈ ಯಜ್ಞವೇದಿಕೆಯು ಚೌಕವಾಗಿರಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ, ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿ ಮಾಡಿಸಬೇಕು. ಅದರ ಎತ್ತರವು ಮೂರು ಮೊಳವಿರಬೇಕು.
Kannada BSI Bible 2016
ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿ ಮಾಡಿಸಬೇಕು; ಅದರ ಎತ್ತರ ಮೂರು ಮೊಳವಿರಬೇಕು.
Kannada Bible (KNCL) BSI 2016
“ಬಲಿಪೀಠವನ್ನು ಜಾಲೀಮರದಿಂದ ಮಾಡಿಸಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಹಾಗು ಮೂರು ಮೊಳ ಎತ್ತರವಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದಲ್ಲದೆ ಜಾಲಿ ಮರದಿಂದ ಬಲಿಪೀಠವನ್ನು ಮಾಡಬೇಕು. ಅದರ ಎತ್ತರವು ಸುಮಾರು ಒಂದು ಮೀಟರ್ ಇರಬೇಕು. ಅದರ ಉದ್ದ ಮತ್ತು ಅಗಲವು ಸುಮಾರು ಎರಡೂವರೆ ಮೀಟರ್ ಚಚ್ಚೌಕವಾಗಿರಬೇಕು.