Exodus 27:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉತ್ತರ ದಿಕ್ಕಿನಲ್ಲಿ ಸಹ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಅದಕ್ಕೆ ಇಪ್ಪತ್ತು ಕಂಬಿಗಳು ಮತ್ತು ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳು ಇರಬೇಕು. ಕಂಬಗಳ ಕೊಂಡಿಗಳನ್ನು ಮತ್ತು ಪರದೆಯ ಕಟ್ಟುಗಳನ್ನು ಬೆಳ್ಳಿಯಿಂದ ಮಾಡಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ರೀತಿಯಲ್ಲಿ ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳೂ, ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು ಕಂಬಗಳ ಕೊಂಡಿಗಳೂ, ಪಟ್ಟಿಗಳೂ ಬೆಳ್ಳಿಯವಾಗಿರಬೇಕು.
Kannada BSI Bible 2016
ಹಾಗೆಯೇ ಉತ್ತರ ಪಾರ್ಶ್ವದಲ್ಲಿ ನೂರು ಮೊಳ ಉದ್ದವಾದ ಪರದೆಗಳೂ ಇಪ್ಪತ್ತು ಸ್ತಂಭಗಳೂ ಇಪ್ಪತ್ತು ಹಿತ್ತಾಳೆಯ ಕುಳಿಗಳೂ ಇರಬೇಕು. ಸ್ತಂಭಗಳ ಕೊಂಡಿಗಳನ್ನೂ ಕಟ್ಟುಗಳನ್ನೂ ಬೆಳ್ಳಿಯಿಂದ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಕಟ್ಟುಗಳೂ ಇರಬೇಕು. ಅದೇ ರೀತಿಯಾಗಿ ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ತೆರೆಗಳೂ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೇ ಕಲ್ಲುಗಳೂ ಇರಬೇಕು. ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವಾಗಿರಬೇಕು.
Kannada Bible (KNCL) BSI 2016
ಅದೇ ರೀತಿ ಉತ್ತರ ಕಡೆಯಲ್ಲೂ ನೂರು ಮೊಳ ಉದ್ದದ ತೆರೆಗಳು, ಇಪ್ಪತ್ತು ಕಂಬಗಳು ಹಾಗು ಇಪ್ಪತ್ತು ತಾಮ್ರದ ಗದ್ದಿಗೇ ಕಲ್ಲುಗಳೂ ಇರಬೇಕು. ಕಂಬಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯಿಂದ ಮಾಡಿದವಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಉತ್ತರ ದಿಕ್ಕಿನ ಪರದೆಗಳು ಸುಮಾರು ನಲವತ್ತೈದು ಮೀಟರ್ ಉದ್ದವಾಗಿರಬೇಕು, ಇಪ್ಪತ್ತು ಸ್ತಂಭಗಳು ಮತ್ತು ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿರಬೇಕು. ಆ ಸ್ತಂಭಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯಿಂದ ಮಾಡಬೇಕು.