Exodus 27:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಪೂರ್ವದಿಕ್ಕಿನಲ್ಲಿ ಅಂಗಳದ ಪ್ರವೇಶದ್ವಾರವಿರುತ್ತದೆ. ಪ್ರವೇಶದ್ವಾರದ ಒಂದು ಕಡೆಯಲ್ಲಿ ಹದಿನೈದು ಮೊಳ ಉದ್ದದ ಪರದೆಗಳು, ಮೂರು ಕಂಬಗಳು ಮತ್ತು ಮೂರು ಗದ್ದಿಗೇಕಲ್ಲುಗಳು ಇರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು.
Kannada BSI Bible 2016
ಒಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳಿದ್ದು ಮೂರು ಸ್ತಂಭಗಳೂ ಮೂರು ಕುಳಿಗಳೂ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಬಾಗಲಿನ ಎರಡು ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳೂ ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೇಕಲ್ಲುಗಳೂ ಇರಬೇಕು.
Kannada Bible (KNCL) BSI 2016
ಅಲ್ಲೆ ಬಾಗಿಲಿನ ಎರಡು ಕಡೆಗಳಲ್ಲೂ ಹದಿನೈದು ಮೊಳ ಉದ್ದವಾದ ತೆರೆಗಳೂ ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೇ ಕಲ್ಲುಗಳೂ ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ವಾರದ ಒಂದು ಬದಿಯ ಪರದೆಗಳು ಸುಮಾರು ಆರುವರೆ ಮೀಟರ್ ಉದ್ದವಾಗಿರಬೇಕು. ಅವುಗಳಿಗೆ ಮೂರು ಸ್ತಂಭಗಳು, ಆ ಸ್ತಂಭಗಳಿಗೆ ಮೂರು ಕಾಲು ಗದ್ದಿಗೇ ಕಲ್ಲುಗಳು ಇರಬೇಕು.