Exodus 27:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಉತ್ತಮವಾದ ಆಲಿವ್‌ಎಣ್ಣೆಯನ್ನು ತರಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು. ಪ್ರತಿ ಸಾಯಂಕಾಲ ಉರಿಸುವ ದೀಪಕ್ಕೆ ಈ ಎಣ್ಣೆಯನ್ನು ಉಪಯೋಗಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಒಲಿವ್ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಒಲಿವ್ ಎಣ್ಣೆಯನ್ನು ತೆಗೆದುಕೊಂಡು ಬರುವಂತೆ ಅವರಿಗೆ ಅಪ್ಪಣೆಕೊಡಬೇಕು.
Kannada BSI Bible 2016
ಇದಲ್ಲದೆ ಬೆಳಕಿಗೋಸ್ಕರ ಯಾವಾಗಲೂ ದೀಪ ವನ್ನು ಉರಿಸುವಂತೆ ಶುದ್ಧವಾದ ಕುಟ್ಟಿದ ಹಿಪ್ಪೆಯ ಎಣ್ಣೆಯನ್ನು ನಿನಗೆ ತರುವ ಹಾಗೆ ಇಸ್ರಾಯೇಲ್‌ ಮಕ್ಕಳಿಗೆ ಅಪ್ಪಣೆಕೊಡಬೇಕು.ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್‌ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಎಣ್ಣೇಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಎಣ್ಣೆಯನ್ನು ತೆಗೆದುಕೊಡಬೇಕೆಂದು ಅವರಿಗೆ ಅಪ್ಪಣೆಯನ್ನು ಮಾಡು.
Kannada Bible (KNCL) BSI 2016
“ಆ ದೀಪವು ಯಾವಾಗಲೂ ಉರಿಯುತ್ತಿರಬೇಕು. ಅದಕ್ಕೆ ಎಣ್ಣೇ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಎಣ್ಣೆಯನ್ನು ತೆಗೆದುಕೊಡಬೇಕೆಂದು ಇಸ್ರಯೇಲರಿಗೆ ಅಪ್ಪಣೆ ಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬೆಳಕಿಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿರುವಂತೆ ಅವರು ಕುಟ್ಟಿದ ಶುದ್ಧವಾದ ಓಲಿವ್ ಎಣ್ಣೆಯನ್ನು ನನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕು.