Exodus 27:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯಜ್ಞವೇದಿಕೆಯ ಉಪಕರಣಗಳನ್ನೆಲ್ಲಾ ತಾಮ್ರದಿಂದ ಮಾಡಿಸಬೇಕು. ಬಟ್ಟಲುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಮತ್ತು ಅಗ್ಗಿಷ್ಟಿಕೆಗಳನ್ನು ಮಾಡಿಸಬೇಕು. ಇವುಗಳನ್ನು ಯಜ್ಞವೇದಿಕೆಯಿಂದ ಬೂದಿಯನ್ನು ತೆಗೆದು ಶುಚಿಗೊಳಿಸುವುದಕ್ಕೆ ಉಪಯೋಗಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ತಟ್ಟೆಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ, ಮುಳ್ಳುಚಮಚಗಳನ್ನೂ, ಹಾಗೂ ಅಗ್ಗಿಷ್ಟಿಕೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.
Kannada BSI Bible 2016
ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿರುವ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು; ಸಲಿಕೆಗಳನ್ನೂ ಬೋಗುಣಿಗಳನ್ನೂ ಮುಳ್ಳುಗಳನ್ನೂ ಅಗ್ಗಿಷ್ಟಿಗೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.
Kannada Bible (KNCL) BSI 2016
ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು. ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಹಾಗು ಅಗ್ಗಿಷ್ಟಿಕೆಗಳನ್ನು ಕೂಡ ಮಾಡಿಸಬೇಕು. ಈ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಮತ್ತು ಬಲಿಪೀಠದ ಉಪಕರಣಗಳನ್ನೆಲ್ಲಾ ಕಂಚಿನಿಂದ ಮಾಡಬೇಕು.