Exodus 27:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಜ್ಞವೇದಿಕೆಗೆ ಹೆಣಿಗೇ ಕೆಲಸದಿಂದ ತಾಮ್ರದ ಜಾಳಿಗೆ ಮಾಡಿಸಬೇಕು. ಈ ಜಾಳಿಗೆಯ ನಾಲ್ಕುಮೂಲೆಗಳಲ್ಲಿ ನಾಲ್ಕು ತಾಮ್ರದ ಬಳೆಗಳನ್ನು ಮಾಡಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಬೇಕು, ಆ ಜಾಲರಿಯ ನಾಲ್ಕು ಮೂಲೆಗಳಿಗೆ ತಾಮ್ರದ ಬಳೆಗಳನ್ನು ಹಾಕಿಸಬೇಕು.
Kannada BSI Bible 2016
ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ವೇದಿಗೆ ಹೆಣಿಗೇ ಕೆಲಸದಿಂದ ತಾಮ್ರದ ಜಾಳಿಗೆಯನ್ನು ಮಾಡಿಸಬೇಕು. ಆ ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ತಾಮ್ರದ ಬಳೆಗಳನ್ನು ಹಾಕಿಸಬೇಕು.
Kannada Bible (KNCL) BSI 2016
ಪೀಠಕ್ಕೆ ಹೆಣಿಗೆ ಕೆಲಸದಿಂದ ತಾಮ್ರದ ಜಾಳಿಗೆಯನ್ನು ಮಾಡಿಸಬೇಕು. ಆ ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ತಾಮ್ರದ ಬಳೆಗಳನ್ನು ಹಾಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಹೆಣಿಗೆ ಕೆಲಸದಿಂದ ಕಂಚಿನ ಜಾಳಿಗೆಯನ್ನು ಮಾಡಿ, ಆ ಜಾಳಿಗೆಯ ನಾಲ್ಕು ಮೂಲೆಗಳಿಗೆ ಕಂಚಿನ ನಾಲ್ಕು ಬಳೆಗಳನ್ನು ಮಾಡಬೇಕು.