Exodus 27:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪವಿತ್ರಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ದಕ್ಷಿಣ ದಿಕ್ಕಿನಲ್ಲಿ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಈ ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಿಶುದ್ಧ ಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ಆ ದಕ್ಷಿಣ ಭಾಗದ ಅಂಗಳಕ್ಕೆ ಪರದೆಗಳು ಇರಬೇಕು. ಆ ಪರದೆಗಳನ್ನು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿಸಬೇಕು. ಅವು ನೂರು ಮೊಳ ಉದ್ದವಾಗಿರಬೇಕು.
Kannada BSI Bible 2016
ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗುಡಾರಕ್ಕೆ ಅಂಗಳವನ್ನು ಏರ್ಪಡಿಸಬೇಕು. ಆ ಅಂಗಳದ ತೆಂಕಣ ಕಡೆಯಲ್ಲಿ ತೆರೆಗಳು ಇರಬೇಕು. ಆ ತೆರೆಗಳು ಹುರಿನಾರಿನ ಬಟ್ಟೆಯಿಂದ ಉಂಟಾಗಿ ನೂರು ಮೊಳ ಉದ್ದವಾಗಿರಬೇಕು.
Kannada Bible (KNCL) BSI 2016
“ಗುಡಾರಕ್ಕೆ ಅಂಗಳವನ್ನು ಏರ್ಪಡಿಸಬೇಕು. ಆ ಅಂಗಳದ ದಕ್ಷಿಣ ಕಡೆಯಲ್ಲಿ ತೆರೆಗಳು ಇರಬೇಕು. ಹುರಿನಾರಿನ ಬಟ್ಟೆಯಿಂದ ತಯಾರಿಸಿದ ಆ ತೆರೆಗಳು ನೂರು ಮೊಳ ಉದ್ದವಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಗುಡಾರದ ಅಂಗಳವನ್ನು ಮಾಡಬೇಕು. ಹೇಗೆಂದರೆ ದಕ್ಷಿಣ ದಿಕ್ಕಿನಲ್ಲಿರುವ ಅಂಗಳಕ್ಕೋಸ್ಕರ ನಯವಾಗಿ ಹೊಸೆದ ನಾರಿನ ಪರದೆಗಳನ್ನು ಮಾಡಬೇಕು. ಅವು ಸುಮಾರು ನಲವತ್ತೈದು ಮೀಟರ್ ಉದ್ದವಾಗಿರಬೇಕು.