Exodus 28:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಿಂದ ನಿನ್ನ ಬಳಿಗೆ ಬರಲು ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಾದ ನಾದ್ವಾ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೂ ಹೇಳು. ಇವರು ಯಾಜಕರಾಗಿ ನನ್ನ ಸೇವೆ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.
Kannada BSI Bible 2016
ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನನಗೆ ಯಾಜಕಸೇವೆ ಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ಯರಲ್ಲಿಂದ ನಿನ್ನ ಹತ್ತಿರಕ್ಕೆ ಕರಿಸಬೇಕು.
Kannada Bible (KNCL) BSI 2016
:ನನಗೆ ಯಾಜಕಸೇವೆ ಮಾಡಲು ನೀನು ನಿನ್ನ ಅಣ್ಣ ಆರೋನನನ್ನು ಮತ್ತು ಅವನ ಮಕ್ಕಳಾದ ನಾದಾಬ್, ಅಬೀಹು, ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರನ್ನು ಇಸ್ರಯೇಲರ ಮಧ್ಯೆಯಿಂದ ನನ್ನ ಬಳಿಗೆ ಕರೆದುಕೊಂಡು ಬಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನಗೆ ಯಾಜಕ ಸೇವೆ ಮಾಡುವುದಕ್ಕೆ ನೀನು ಇಸ್ರಾಯೇಲರಿಂದ ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಎಂಬುವರನ್ನು ನಿನ್ನ ಹತ್ತಿರ ಬರಮಾಡಬೇಕು.