Exodus 28:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಈ ಎರಡು ರತ್ನಗಳನ್ನು ಏಫೋದಿನ ಪ್ರತಿಭುಜದ ಪಟ್ಟಿಯಲ್ಲಿಡು. ಆರೋನನು ಯೆಹೋವನ ಮುಂದೆ ನಿಲ್ಲುವಾಗ ಈ ವಿಶೇಷ ಅಂಗಿಯನ್ನು ಧರಿಸಿಕೊಂಡಿರುವನು. ಇಸ್ರೇಲನ ಗಂಡುಮಕ್ಕಳ ಹೆಸರುಗಳುಳ್ಳ ಎರಡು ರತ್ನಗಳು ಏಫೋದಿನ ಮೇಲಿರುತ್ತವೆ. ದೇವರು ಇಸ್ರೇಲರನ್ನು ಜ್ಞಾಪಿಸಿಕೊಳ್ಳುವಂತೆ ಈ ರತ್ನಗಳು ಮಾಡುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋದಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗೆಲ್ಲಾ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಹೋಗುವನು.
Kannada BSI Bible 2016
ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್‌ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಕವಚದ ಪಟ್ಟಿಗಳಲ್ಲಿ ಬಿಗಿಸಬೇಕು. ಅವು ಇಸ್ರಾಯೇಲ್ಯರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗೆಲ್ಲಾ ಇಸ್ರಾಯೇಲ್ಯರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವದಕ್ಕಾಗಿ ತನ್ನ ಎರಡು ಭುಜಗಳ ಮೇಲೆ ಧರಿಸಿಕೊಂಡು ಹೋಗುವನು.
Kannada Bible (KNCL) BSI 2016
ಇಸ್ರಯೇಲರ ಜ್ಞಾಪಕಾರ್ಥವಾಗಿ ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಕವಚದ ಪಟ್ಟಿಗಳಲ್ಲಿ ಬಿಗಿಸಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಬರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಎರಡು ರತ್ನಗಳನ್ನು ಏಫೋದಿನ ಹೆಗಲಿನ ಭಾಗದ ಮೇಲೆ ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.