Exodus 28:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮಹಾಯಾಜಕನಿಗೆ ದೈವನಿರ್ಣಯದ ಪದಕವನ್ನು ಮಾಡಿಸು. ಏಫೋದನ್ನು ಮಾಡಿಸಿದಂತೆ ನಿಪುಣರಾದ ಕೆಲಸಗಾರರಿಂದ ಇದನ್ನು ಮಾಡಿಸಬೇಕು. ಚಿನ್ನದ ದಾರಗಳು, ಉತ್ಕೃಷ್ಟವಾದ ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪು ದಾರಗಳನ್ನು ಉಪಯೋಗಿಸಿ ಇದನ್ನು ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನ್ಯಾಯತೀರ್ಪಿನ ಎದೆಯ ಪದಕದ ಕವಚವನ್ನು ಕಸೂತಿ ಕೆಲಸದಿಂದ ಮಾಡಿಸಬೇಕು. ಅದನ್ನು ಏಫೋದ್ ಅನ್ನು ಮಾಡಿಸಿದ ಹಾಗೆಯೇ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಬೇಕು.
Kannada BSI Bible 2016
ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ದೈವನಿರ್ಣಯದ ಚೀಲದ ಪದಕವನ್ನು ಬುಟೇದಾರಿ ಕೆಲಸದಿಂದ ಮಾಡಿಸಬೇಕು. ಅದನ್ನು ಕವಚದ ಕೆಲಸದಂತೆಯೆ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಲ್ಲಿ ಮಾಡಿಸಬೇಕು.
Kannada Bible (KNCL) BSI 2016
“ದೈವನಿರ್ಣಯದ ಚೀಲವುಳ್ಳ ಎದೆಫಲಕವನ್ನು ಕಸೂತಿ ಕೆಲಸದಿಂದ ಮಾಡಿಸು. ಅದನ್ನು ಏಫೋದ್ ಕವಚದ ಕೆಲಸದಂತೆಯೇ ಚಿನ್ನದ ದಾರದಿಂದಲೂ, ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಿಂದ ಮಾಡಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವನಿರ್ಣಯ ಮಾಡುವ ಆತನ ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಂದರೆ ಏಫೋದಿನ ಕೆಲಸದ ಹಾಗೆಯೇ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿಸಬೇಕು.