Exodus 28:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲನ ಗಂಡುಮಕ್ಕಳಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ರತ್ನದಂತೆ ದೈವನಿರ್ಣಯ ಪದಕದಲ್ಲಿ ಹನ್ನೆರಡು ರತ್ನಗಳಿರಬೇಕು. ಪ್ರತಿಯೊಂದು ಕಲ್ಲುಗಳಲ್ಲಿ ಇಸ್ರೇಲನ ಗಂಡುಮಕ್ಕಳ ಒಬ್ಬೊಬ್ಬರ ಹೆಸರನ್ನು ಬರೆಸಬೇಕು. ಒಬ್ಬ ಕೆಲಸಗಾರನು ಮುದ್ರೆಯನ್ನು ಕೆತ್ತುವಂತೆ ಈ ಹೆಸರುಗಳನ್ನು ಪ್ರತಿ ರತ್ನದ ಮೇಲೆ ಕೆತ್ತಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಕುಲಗಳ ಸಂಖ್ಯೆಗೆ ಅನುಗುಣವಾಗಿ ಹನ್ನೆರಡು ರತ್ನಗಳಿರಬೇಕು. ಮುದ್ರೆಗಳನ್ನು ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.
Kannada BSI Bible 2016
ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಕುಲಗಳ ಸಂಖ್ಯಾಪ್ರಕಾರ ಹನ್ನೆರಡು ರತ್ನಗಳಿರಬೇಕು. ಮುದ್ರಾರತ್ನದಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.
Kannada Bible (KNCL) BSI 2016
ಇಸ್ರಯೇಲರ ಕುಲಗಳ ಸಂಖ್ಯಾನುಸಾರ ಹನ್ನೆರಡು ರತ್ನಗಳಿರಬೇಕು. ಮುದ್ರಾ ರತ್ನದಲ್ಲಿ ಕೆತ್ತುವಂತೆ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ರತ್ನಗಳು ಇಸ್ರಾಯೇಲರ ಗೋತ್ರದ ಹೆಸರುಗಳ ಪ್ರಕಾರ ಅವು ಹನ್ನೆರಡಾಗಿರಬೇಕು. ಒಂದೊಂದರ ಮೇಲೆ ಒಂದೊಂದು ಹೆಸರಿದ್ದು, ಹನ್ನೆರಡು ಗೋತ್ರಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.