Exodus 28:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚಿನ್ನದ ಸರಪಣಿಗಳ ಇನ್ನೊಂದು ಕೊನೆಗಳನ್ನು ಎರಡು ಪಟ್ಟಿಗಳಿಗೆ ಬಿಗಿಯಾಗಿ ಕಟ್ಟಿಸಬೇಕು. ಇದು ಮುಂಬದಿಯಲ್ಲಿರುವ ಏಫೋದಿನ ಎರಡು ಭುಜದ ಪಟ್ಟಿಗಳಿಗೆ ಬಿಗಿಯಾಗಿ ಹಿಡಿದುಕೊಂಡಿರುವಂತೆ ಮಾಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸರಪಣಿಗಳ ಕೊನೆಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಕೊಂಡಿಗಳಲ್ಲಿ ಸಿಕ್ಕಿಸಿ ಮುಂಭಾಗದಲ್ಲಿರಿಸಬೇಕು.
Kannada BSI Bible 2016
ಹೆಣೆದ ಆ ಎರಡು ಸರಪಣಿಗಳ ಕೊನೆಗಳನ್ನು ಎರಡು ಜವೆಗಳಲ್ಲಿ ಸೇರಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಯಲ್ಲಿ ಇರಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸರಪಣಿಗಳ ಕೊನೆಗಳನ್ನು ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಜವೆಗಳ ಮುಂಭಾಗಕ್ಕೆ ಸಿಕ್ಕಿಸಬೇಕು.
Kannada Bible (KNCL) BSI 2016
ಆ ಸರಪಣಿಗಳ ಕೊನೆಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಜವೆಗಳ ಮುಂಭಾಗಕ್ಕೆ ಸಿಕ್ಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಎರಡು ಜವೆಗಳಲ್ಲಿ ಸೇರಿಸಿ, ಏಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಬೇಕು.