Exodus 28:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇನ್ನೆರಡು ಚಿನ್ನದ ಬಳೆಗಳನ್ನು ಮಾಡಿಸಿ ಅವುಗಳನ್ನು ಏಫೋದಿನ ಭುಜಪಟ್ಟಿಗಳ ಮುಂಭಾಗದ ಕೆಳಗೆ ಸಿಕ್ಕಿಸು. ಈ ಚಿನ್ನದ ಬಳೆಗಳನ್ನು ಏಫೋದಿನ ನಡುಕಟ್ಟಿನ ಮೇಲ್ಗಡೆ ಇರಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಬೇರೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಏಫೋದ್ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಕಸೂತಿ ಹಾಕಿಸಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು.
Kannada BSI Bible 2016
ಚಿನ್ನದ ಬೇರೆ ಎರಡು ಬಳೆಗಳನ್ನು ಮಾಡಿ ಎಫೋದಿನ ಎರಡು ಹೆಗಲ ಭಾಗಗಳಲ್ಲಿ ಕೆಳಗೆ ಮುಂದುಗಡೆಯಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಣೆಯ ಎದುರಾಗಿ ಇರಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ, ಆ ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು.
Kannada Bible (KNCL) BSI 2016
ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಕಸೂತಿ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ, ಏಫೋದಿನ ಮುಂಬದಿಯ ಕೆಳಗಿನ ಎರಡು ಹೆಗಲಿನ ಪಟ್ಟಿಗಳಲ್ಲಿ, ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಬೇಕು.