Exodus 28:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಬಟ್ಟೆಗಳನ್ನು ಮಾಡುವಂಥ ಕೆಲವು ನಿಪುಣರಿದ್ದಾರೆ. ನಾನು ಅವರಿಗೆ ವಿಶೇಷ ಜ್ಞಾನವನ್ನು ಕೊಟ್ಟಿದ್ದೇನೆ. ಆರೋನನಿಗೆ ಬೇಕಾದ ಬಟ್ಟೆಗಳನ್ನು ಮಾಡಲು ಅವರಿಗೆ ಹೇಳು. ಅವನು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾನೆಂದು ಈ ಬಟ್ಟೆಗಳು ತೋರಿಸುತ್ತವೆ. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.
Kannada BSI Bible 2016
ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರಿಗೆ ನಾನು ಜಾಣತನದ ವರವನ್ನು ಪರಿಪೂರ್ತಿಯಾಗಿ ಅನುಗ್ರಹಿಸಿದ್ದೇನೋ ಅಂಥ ಜಾಣರೆಲ್ಲರ ಸಂಗಡ ನೀನು ಮಾತಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವದಕ್ಕೆ ಪ್ರತಿಷ್ಠಿತನಾಗುವನು.
Kannada Bible (KNCL) BSI 2016
ಯಾರಿಗೆ ನಾನು ಕಲಾಕುಶಲತೆಯನ್ನು ಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥವರೊಡನೆ ಚರ್ಚಿಸಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕ ಸೇವೆಗೆ ಪ್ರತಿಷ್ಠಿತನಾಗಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಾನು ಜ್ಞಾನದ ಆತ್ಮದಿಂದ ತುಂಬಿದ ವಿವೇಕದ ಹೃದಯವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.