Exodus 28:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೈವನಿರ್ಣಯದ ಪದಕದೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಡು. ಆರೋನನು ಯೆಹೋವನ ಮುಂದೆ ಹೋಗುವಾಗ ಅವುಗಳು ಅವನ ಎದೆಯ ಮೇಲಿರುವವು. ಹೀಗೆ ಆರೋನನು ಯೆಹೋವನ ಮುಂದೆ ನಿಲ್ಲುವಾಗಲೆಲ್ಲಾ, ಜನರಿಗೆ ತೀರ್ಪು ನೀಡತಕ್ಕದ್ದನ್ನು ಯಾವಾಗಲೂ ತನ್ನ ಎದೆಯ ಮೇಲೆ ಹೊತ್ತುಕೊಂಡಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಆ ಎದೆಯ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರಬೇಕು.
Kannada BSI Bible 2016
ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳನ್ನು ಆ ಚೀಲದ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲ್ಯರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರುವನು.
Kannada Bible (KNCL) BSI 2016
ದೈವನಿರ್ಣಯವನ್ನು ತಿಳಿಸುವ ಊರಿಮ್ ಹಾಗು ತುಮ್ಮೀಮ್ ಎಂಬ ದಾಳಗಳನ್ನು ಆ ಫಲಕದ ಚೀಲದಲ್ಲಿ ಇಡಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಅವು ಅವನ ಎದೆಯ ಮೇಲೆ ಇರುವುವು. ಇಸ್ರಯೇಲರು ಕೈಗೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಯಾವಾಗಲು ಧರಿಸಿಕೊಂಡಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿರ್ಣಯವನ್ನು ತಿಳಿಸುವ ಎದೆಪದಕದಲ್ಲಿ ಊರೀಮ್ ಮತ್ತು ತುಮ್ಮೀಮ್‌ಗಳನ್ನು ಇಡಬೇಕು. ಆರೋನನು ಯೆಹೋವ ದೇವರ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಯೆಹೋವ ದೇವರ ಮುಂದೆ ಯಾವಾಗಲೂ ಇಸ್ರಾಯೇಲರ ನಿರ್ಣಯಗಳನ್ನು ತನ್ನ ಹೃದಯದ ಮೇಲೆ ಹೊರಬೇಕು.