Exodus 28:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಟ್ಟೆಯ ಅಂಚಿನ ಸುತ್ತಲೂ ದಾಳಿಂಬೆ ಹಣ್ಣುಗಳನ್ನು ಮಾಡಲು ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಬೇಕು. ಆ ದಾಳಿಂಬೆ ಹಣ್ಣಿನ ಚೆಂಡುಗಳನ್ನು ನಿಲುವಂಗಿಯ ಕೆಳಅಂಚಿನಲ್ಲಿ ಸುತ್ತಲೂ ನೇತಾಡುವಂತೆ ಸಿಕ್ಕಿಸಬೇಕು. ದಾಳಿಂಬೆ ಹಣ್ಣಿನ ಚೆಂಡುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಸಿಕ್ಕಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣುಗಳನ್ನು ಅವುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಹಾಕಿಸಬೇಕು.
Kannada BSI Bible 2016
ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಲಂಗಿಯ ಅಂಚಿನ ಸುತ್ತಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣಿನಂತೆ ಚಂಡುಗಳನ್ನೂ ಅವುಗಳ ನಡುವೆ ಚಿನ್ನದ ಗೆಜ್ಜೆಗಳನ್ನೂ ತಗಲಿಸಬೇಕು.
Kannada Bible (KNCL) BSI 2016
ಮೇಲಂಗಿಯ ಅಂಚಿನ ಸುತ್ತಲೂ ನೀಲಿ, ಊದ ಹಾಗು ಕಡುಗೆಂಪು ರಕ್ತವರ್ಣಗಳುಳ್ಳ ದಾರದಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನೂ ಅವುಗಳ ನಡುವೆ ಗೆಜ್ಜೆಗಳನ್ನೂ ತಗಲಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಲುವಂಗಿಯ ಅಂಚಿನ ಮೇಲೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ದಾಳಿಂಬೆ ಹಣ್ಣಿನಂತೆ ಅದರ ಅಂಚಿನ ಸುತ್ತಲೂ ಮಾಡಿ, ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನೂ ಸುತ್ತಲೂ ಇರಿಸಬೇಕು.