Exodus 28:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆರೋನನ ಗಂಡುಮಕ್ಕಳಿಗೂ ಅಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸು. ಇವು ಅವರಿಗೆ ಘನತೆ ಮತ್ತು ಗೌರವಗಳನ್ನು ಕೊಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನ ಮಕ್ಕಳಿಗೆ ತಕ್ಕ ಗೌರವಕ್ಕಾಗಿಯೂ, ಅಲಂಕಾರಕ್ಕಾಗಿಯೂ ಅವರಿಗೆ ಮೇಲಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸಬೇಕು.
Kannada BSI Bible 2016
ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನ ಮಕ್ಕಳಿಗೆ ತಕ್ಕ ಗೌರವವೂ ಅಲಂಕಾರವೂ ಉಂಟಾಗುವಂತೆ ಅವರಿಗೆ ನಿಲುವಂಗಿಗಳನ್ನೂ ನಡುಕಟ್ಟುಗಳನ್ನೂ ಮುಂಡಾಸಗಳನ್ನೂ ಮಾಡಿಸಬೇಕು.
Kannada Bible (KNCL) BSI 2016
“ಆರೋನನ ಮಕ್ಕಳಿಗೆ ತಕ್ಕ ಗೌರವ ಹಾಗು ಶೋಭೆ ಸಿಗುವಂತೆ ನಿಲುವಂಗಿಗಳನ್ನೂ ನಡುಕಟ್ಟುಗಳನ್ನೂ ಹಾಗು ಪೇಟಗಳನ್ನು ಮಾಡಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನ ಮಕ್ಕಳಿಗೆ ತಕ್ಕ ಗೌರವ ಹಾಗೂ ಶೋಭೆ ಸಿಗುವಂತೆ ನಿಲುವಂಗಿಗಳನ್ನೂ, ನಡುಕಟ್ಟುಗಳನ್ನೂ ಹಾಗೂ ಪೇಟಗಳನ್ನೂ ಮಾಡಿಸು.