Exodus 28:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾಜಕರಿಗೆ ಒಳಗಿನ ಉಡುಪುಗಳನ್ನು ಮಾಡಲು ನಾರುಬಟ್ಟೆಯನ್ನು ಉಪಯೋಗಿಸು. ಈ ಒಳಗಿನ ಉಡುಪುಗಳು ಅವರನ್ನು ಸೊಂಟದಿಂದ ತೊಡೆಯವರೆಗೆ ಮುಚ್ಚುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಅವರ ನಗ್ನತೆಯನ್ನು ಮರೆಮಾಡುವುದಕ್ಕಾಗಿ ಅವರಿಗೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಸಣಬಿನ ದಾರದಿಂದ ಮಾಡಿಸಬೇಕು.
Kannada BSI Bible 2016
ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಇಜಾರುಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯ ವರೆಗೆ ಇರಬೇಕು.ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಅವರ ರಹಸ್ಯಾಂಗವು ಕಾಣಿಸದಂತೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಮಾಡಿಸಬೇಕು.
Kannada Bible (KNCL) BSI 2016
ಅದೂ ಅಲ್ಲದೆ ಅವರ ಗುಪ್ತಾಂಗ ಕಾಣಿಸದಂತೆ ಸೊಂಟದಿಂದ ತೊಡೆಯ ತನಕ ನಾರಿನ ಚಡ್ಡಿಗಳನ್ನು ಮಾಡಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಚಡ್ಡಿಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯವರೆಗೆ ಇರಬೇಕು.