Exodus 28:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇವರು ಏಫೋದಿಗೆ ಸೇರಿಸಲ್ಪಟ್ಟಿರುವ ನಡುಕಟ್ಟನ್ನು ಬಹಳ ಎಚ್ಚರಿಕೆಯಿಂದ ಹೆಣೆಯಬೇಕು. ಏಫೋದನ್ನು ತಯಾರಿಸಿದಂತೆಯೇ ಈ ನಡುಕಟ್ಟನ್ನು ತಯಾರಿಸಬೇಕು. ಚಿನ್ನದ ದಾರಗಳು, ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಿ ಇದನ್ನು ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕವಚದ ಮೇಲಿರುವ ಕಸೂತಿ ಕೆಲಸದ ನಡುಕಟ್ಟು ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಲ್ಪಟ್ಟು ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಅಲಂಕೃತವಾಗಿರಬೇಕು.
Kannada BSI Bible 2016
ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕವಚದ ಮೇಲಿರುವ ವಿಚಿತ್ರವಾದ ಬುಟೇದಾರಿಯ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ಹುರಿನಾರಿನ ಬಟ್ಟೆಯಿಂದ ಮಾಡಲ್ಪಟ್ಟು ಚಿನ್ನದ ದಾರದಿಂದಲೂ ನೀಲಿ ಧೂಮ್ರರಕ್ತವರ್ಣಗಳುಳ್ಳ ದಾರದಿಂದಲೂ ಅಲಂಕರಿಸಲ್ಪಡಬೇಕು.
Kannada Bible (KNCL) BSI 2016
ಕವಚದ ಮೇಲಿರುವ ಕಸೂತಿ ಕೆಲಸದ ನಡುಕಟ್ಟು ಕವಚದ ಅಂಗವಾಗಿರಬೇಕು. ಅದರಂತೆಯೇ ಹುರಿನಾರಿನ ಬಟ್ಟೆಯಿಂದ ಮಾಡಿರಬೇಕು. ಚಿನ್ನದ ದಾರದಿಂದಲೂ ನೀಲಿ, ಊದ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಅಲಂಕೃತವಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಮೇಲಿರುವ ಕಸೂತಿ ಕೆಲಸದ ಏಫೋದಿನ ನಡುಕಟ್ಟನ್ನು ಒಂದೇ ರೀತಿಯ ವಸ್ತುಗಳಿಂದ ತಯಾರಿಸಬೇಕು ಅಂದರೆ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿದ್ದಾಗಿರಬೇಕು.