Exodus 29:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಆರೋನನು ಮತ್ತು ಅವನ ಗಂಡುಮಕ್ಕಳು ಅಭಿಷೇಕಿಸಲ್ಪಟ್ಟ ಮತ್ತು ಪ್ರತ್ಯೇಕಿಸಲ್ಪಟ್ಟ ಯಾಜಕರಾಗಿ ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡಲು ಅವರು ಮಾಡತಕ್ಕದ್ದೇನೆಂಬುದನ್ನು ನಾನೀಗ ಹೇಳುವೆನು. ಯಾವ ಅಂಗದೋಷವಿಲ್ಲದ ಒಂದು ಹೋರಿಮರಿಯನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವುದಕ್ಕೆ ನೀನು ಮಾಡಬೇಕಾಗಿರುವ ಕಾರ್ಯಗಳೆನೆಂದರೆ; ಒಂದು ಹೋರಿ ಮತ್ತು ಕರುವನ್ನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು.
Kannada BSI Bible 2016
ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವದಕ್ಕೆ ನೀನು ಮಾಡಬೇಕಾದ ಕಾರ್ಯ ಯಾವದಂದರೆ - ಒಂದು ಹೋರಿಕರುವನ್ನೂ ಪೂರ್ಣಾಂಗವಾದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು;
Kannada Bible (KNCL) BSI 2016
“ಆರೋನನು ಮತ್ತು ಅವನ ಮಕ್ಕಳು ನನಗೆ ಯಾಜಕರಾಗಿ ಸೇವೆ ಸಲ್ಲಿಸುವಂತೆ ನೀನು ಅವರನ್ನು ಹೀಗೆ ಪ್ರತಿಷ್ಠಿಸು: ಕಳಂಕರಹಿತವಾದ ಒಂದು ಹೋರಿಕರುವನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರು ನನಗೆ ಯಾಜಕ ಸೇವೆಮಾಡುವಂತೆ ನೀನು ಅವರನ್ನು ಶುದ್ಧ ಮಾಡಲು ಮಾಡಬೇಕಾದದ್ದೇನೆಂದರೆ: ದೋಷವಿಲ್ಲದ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ,