Exodus 29:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತರುವಾಯ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬಳಿಗೆ ಹೋಗು. ವೇದಿಕೆಯ ಕೊಂಬುಗಳಿಗೆ ನಿನ್ನ ಬೆರಳಿನಿಂದ ರಕ್ತವನ್ನು ಹಚ್ಚು. ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಕೆಯ ಬುಡಕ್ಕೆ ಸುರಿದುಬಿಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು.
Kannada BSI Bible 2016
ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು.
Kannada Bible (KNCL) BSI 2016
ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲ ಬಲಿಪೀಠದ ಬುಡಕ್ಕೆ ಸುರಿಯಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ, ರಕ್ತವನ್ನೆಲ್ಲಾ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.