Exodus 29:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಹೋರಿಯ ಒಳಗಿನ ಕೊಬ್ಬನ್ನೂ ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೂ ತೆಗೆದುಬಿಡು. ಈ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.
Kannada BSI Bible 2016
ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ವಪೆಯನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು.
Kannada Bible (KNCL) BSI 2016
ಅದರ ವಪೆಯನ್ನು, ಕಾಳಿಜದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಹಾಗು ಅವುಗಳ ಮೇಲಿರುವ ಕೊಬ್ಬನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಹೋಮ ಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಕರುಳುಗಳನ್ನೂ ಅವುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಸುಡಬೇಕು.