Exodus 29:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಹೋರಿಯ ಮಾಂಸ, ಚರ್ಮ, ಇತರ ಭಾಗಗಳನ್ನು ತೆಗೆದುಕೊಂಡು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಟ್ಟುಬಿಡು. ಇದು ಯಾಜಕರ ಪಾಪಗಳನ್ನು ಪರಿಹರಿಸುವ ಕಾಣಿಕೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ.
Kannada BSI Bible 2016
ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೋರಿಯ ಮಾಂಸವನ್ನೂ ಚರ್ಮವನ್ನೂ ಕಲ್ಮಷವನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಇದು ದೋಷಪರಿಹಾರಕಯಜ್ಞ.
Kannada Bible (KNCL) BSI 2016
ಹೋರಿಯ ಮಾಂಸವನ್ನು, ಚರ್ಮವನ್ನು ಹಾಗು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ಪಾಪಪರಿಹಾರಕ ಬಲಿದಾನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಹೋರಿಯ ಮಾಂಸವನ್ನೂ ಅದರ ಚರ್ಮವನ್ನೂ, ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿದೆ.