Exodus 29:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬಳಿಕ ಟಗರಿನ ಕೊಬ್ಬನ್ನೂ ತೆಗೆದುಕೊ. (ಇದು ಆರೋನನನ್ನು ಪ್ರಧಾನಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು.) ಬಾಲದ ಸುತ್ತಲಿರುವ ಕೊಬ್ಬನ್ನು, ದೇಹದ ಒಳಗಿನ ಅಂಗಗಳನ್ನು ಮುಚ್ಚಿಕೊಂಡಿರುವ ಕೊಬ್ಬನ್ನು, ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಮತ್ತು ಬಲತೊಡೆಯನ್ನು ತೆಗೆದುಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಷ್ಠೆಗಾಗಿ ಸಮರ್ಪಿಸಲ್ಪಟ್ಟ ಟಗರಾಗಿರುವುದರಿಂದ ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಪಿತ್ತಕೋಶದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಕೋಶಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಹಾಗೂ ಬಲತೊಡೆಯನ್ನು,
Kannada BSI Bible 2016
ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಲ್ಪಟ್ಟ ಆ ಟಗರಿನ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನೂ ವಪೆಯನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ
Kannada Bible (KNCL) BSI 2016
ಪಟ್ಟಾಭಿಷೇಕಕ್ಕಾಗಿ ಸಮರ್ಪಿತವಾದ ಆ ಟಗರನ್ನೆಲ್ಲ, ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಕಾಳಿಜದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು, ಅವುಗಳ ಮೇಲಿರುವ ಕೊಬ್ಬನ್ನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಳ್ಳಬೇಕು. ಏಕೆಂದರೆ ಅದು ಪ್ರತಿಷ್ಠೆಯ ಟಗರು.