Exodus 29:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ನೀನು ಮಾಡಿದ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನು ತೆಗೆದುಕೊ. ಇದು ಯೆಹೋವನ ಮುಂದೆ ಇಟ್ಟ ಬುಟ್ಟಿಯಾಗಿದೆ. ಒಂದು ತುಂಡು ರೊಟ್ಟಿ, ಎಣ್ಣೆಯಿಂದ ಮಾಡಿದ ಒಂದು ಹೋಳಿಗೆ, ತೆಳುವಾದ ಒಂದು ಕಡುಬು ಇವುಗಳನ್ನು ಬುಟ್ಟಿಯಿಂದ ತೆಗೆದುಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಮತ್ತು ಒಂದು ಕಡುಬನ್ನು ತೆಗೆದುಕೊಂಡು,
Kannada BSI Bible 2016
ಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಬಲದೊಡೆಯನ್ನೂ ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನೂ ಎಣ್ಣೆ ವಿುಶ್ರವಾದ ಒಂದು ಹೋಳಿಗೆಯನ್ನೂ ಒಂದು ಕಡುಬನ್ನೂ ತೆಗೆದುಕೊಂಡು
Kannada Bible (KNCL) BSI 2016
ಬಲತೊಡೆಯನ್ನು ಮತ್ತು ಸರ್ವೇಶ್ವರನಾದ ನನಗೆದುರಾಗಿ ಪುಟ್ಟಿಯಲ್ಲಿ ಇಟ್ಟಿರುವ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿಯನ್ನೂ