Exodus 29:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಯೆಹೋವನ ಮುಂದೆ ಇವುಗಳನ್ನು ತಮ್ಮ ಕೈಯಲ್ಲಿ ಹಿಡಿದುಕೊಂಡು ನಿವಾಳಿಸಬೇಕೆಂದು ಅವರಿಗೆ ಹೇಳು. ಇದು ಯೆಹೋವನಿಗೆ ವಿಶೇಷವಾದ ನೈವೇದ್ಯಾರ್ಪಣೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ಅರ್ಪಿಸಬೇಕು.
Kannada BSI Bible 2016
ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
Kannada Bible (KNCL) BSI 2016
ಅವುಗಳನ್ನೆಲ್ಲ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಆರತಿ ಮಾಡಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಪುತ್ರರ ಕೈಗಳಿಗೆ ಕೊಟ್ಟು, ಅವರು ಯೆಹೋವ ದೇವರ ಮುಂದೆ ಅದನ್ನು ನೈವೇದ್ಯವಾಗಿ ನಿವಾಳಿಸಬೇಕು.